Actor Darshan ಗೆ ಮತ್ತೊಂದು ಸಂಕಷ್ಟ: ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ!
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಣದ ವಹಿವಾಟು ಕೂಡ ನಡೆದಿದ್ದು, ಇದೇ ಕಾರಣಕ್ಕೆ ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Actor Darshan)ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿನ ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ ಆರಂಭವಾಗಲಿದೆ ಎಂದು ಹೇಳಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಣದ ವಹಿವಾಟು ಕೂಡ ನಡೆದಿದ್ದು, ಇದೇ ಕಾರಣಕ್ಕೆ ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಈ ಕೇಸ್ನಲ್ಲಿ ದರ್ಶನ್ ಅವರ ವಿಚಾರಣೆ ನಡೆಯಲಿದ್ದು, ಇದರಿಂದ ನಟ ದರ್ಶನ್ ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ ದರ್ಶನ್ ಇರುವ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬರಲಿದ್ದು, ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್ ರ ವಿಚಾರಣೆ ಮಾಡಲಿದ್ದಾರೆ. ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ನ್ಯಾಯಾಲಯದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇ-ಮೇಲ್ ಕೂಡ ರವಾನೆಯಾಗಿದೆ ಎನ್ನಲಾಗಿದೆ.
ಸಂಚು ತಂದ ಆಪತ್ತು
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪವನ್ನು ಮತ್ತಿಬ್ಬರ ಮೇಲೆ ಹೊರಿಸಲು ಪ್ಲ್ಯಾನ್ ಮಾಡಿದ್ದರು. ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿದ್ದರು. ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲಾಧಿಕಾರಿಗಳು ಖಚಿತಪಡಿಸಿದ್ದಾರೆ.
ಜಾಮೀನಿಗೆ ಅರ್ಜಿ ಸಲ್ಲಿಸಿರುವ ದರ್ಶನ್
ಇನ್ನು ನಟ ದರ್ಶನ್ ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ಸೆಪ್ಟೆಂಬರ್ 27ರಂದು ಕೋರ್ಟ್ನಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



