ರಾಜ್ಯ

ನಿಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ... ರಾಜಿನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಂತೋಷ್ ಹೆಗ್ಡೆ

ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ್ದಾರೆ.

ನಿಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ... ರಾಜಿನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಂತೋಷ್ ಹೆಗ್ಡೆ
ಸಂತೋಷ್ ಹೆಗ್ಡೆ-ಸಿದ್ದರಾಮಯ್ಯ
Published On :

ಮಂಗಳೂರು: ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಆದೇಶಿಸಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನಿನ್ನೆ ಅರ್ಜಿ ವಜಾಗೊಳಿಸಿತ್ತು. ಇದರ ಮಧ್ಯೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಸಂಭವಿಸಿದ್ದಕ್ಕೆ ಅದರ ಹೊಣೆಹೊತ್ತು ರಾಜೀನಾಮೆ ನೀಡಿದ್ದರು.

ಇನ್ನು ರಾಜೀನಾಮೆ ಕೊಡುವುದು, ಬಿಡುವುದು ಸಿದ್ದರಾಮಯ್ಯಗೆ ಬಿಟ್ಟಿದ್ದು. ಇಂತಹ ಗಂಭೀರ ಆರೋಪ ಕೇಳಿಬಂದಾಗ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡಲೇಬೇಕು ಎಂಬ ಕಾನೂನಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಎಂದು ಹೇಳಿದೆ. ಹಾಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅನಿಸುತ್ತಿದೆ. ಒಂದು ವೇಳೆ ತಾವು ನಿರಪರಾಧಿ ಎಂಬುದು ಸಾಬೀತಾದರೆ ಮತ್ತೆ ಹುದ್ದೆ ಅಲಂಕರಿಸಲಿ. ಹೈಕೋರ್ಟ್ ತೀರ್ಪಿಗೂ ಮುನ್ನ ನಾನು ತಪ್ಪೇ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ನಡೆದಿದೆ ಎಂದು ಹೇಳಿದೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ ರಾಜಿನಾಮೆ ನೀಡುವುದು ಉತ್ತಮ ಎಂದು ಸಂತೋಷ್ ಹೆಗ್ಡೆ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.