ಬೆಂಗಳೂರು: ಆನೇಕಲ್‌ನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ನಿನ್ನೆ ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದನು.
ಜಿಗಣಿಯ ಖಾಸಗಿ ಕಂಪನಿಯೊಂದರಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಗಿರೀಶ್ ಬೋರಾ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದನು. ಗಿರೀಶ್ ಬೋರಾನ ಬಗ್ಗೆ ಪಕ್ಕಾ ಮಾಹಿತಿ ಕಲೆಹಾಕಿದ್ದು ಅಸ್ಸಾಂ ಎನ್ಐಎ ತಂದ ಇದೀಗ ಶಂಕಿತ ಉಗ್ರನನ್ನು ಬಂಧಿಸಿದೆ.
ಸದ್ಯ ಶಂಕಿತ ಉಗ್ರನ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ಅಧಿಕಾರಿಗಳು ಅಸ್ಸಾಂಗೆ ಕರೆದೊಯ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



