ರಾಜ್ಯ

ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹೆಚ್ ಡಿ ಕುಮಾರಸ್ವಾಮಿ ಹಾಜರು

ದೆಹಲಿಯಿಂದ ಬಂದ ಅವರು ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು.

ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹೆಚ್ ಡಿ ಕುಮಾರಸ್ವಾಮಿ ಹಾಜರು
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಹಿನ್ನೆಲೆ ಇಂದು ಶುಕ್ರವಾರ ಸಂಜೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು.

ದೆಹಲಿಯಿಂದ ಬಂದ ಅವರು ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ಹಾಗಾಗಿ ಬೆಂಗಳೂರು ಏರ್ಪೋರ್ಟ್​ನಿಂದ ಹೊರಟು ಸಾಯಂಕಾಲ ಹಾಜರಾದರು. ಈಗಾಗಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ಕಾನೂನಿನ ಪ್ರಕಾರವೇ ಕ್ರಮಕೈಗೊಳ್ಳಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಏಜೆನ್ಸಿಗಳು ಸ್ವಾಧೀನಪಡಿಸಿಕೊಂಡಿರುವ ಹಲವಾರು ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮುಡಾ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಹಳೆ ಪ್ರಕರಣಗಳನ್ನು ಕೆದಕಿ ನಮನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.