ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR
ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.
ಎ1 ಆರೋಪಿ: ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
ಐಪಿಸಿ ಸೆಕ್ಷನ್ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್ ದಾಖಲಾಗಿದೆ.
ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿತ್ತು.
ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಸುಲಿಗೆ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದ್ದು, ಅದಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


