ರಾಜ್ಯ

ಈಗ ನಿರ್ಮಲಾ ಸೀತಾರಾಮನ್‌ ಅವರು ರಾಜೀನಾಮೆ ನೀಡಬೇಕು ಅಲ್ಲವೇ: ಸಿದ್ದರಾಮಯ್ಯ

ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಈಗ ನಿರ್ಮಲಾ ಸೀತಾರಾಮನ್‌ ಅವರು ರಾಜೀನಾಮೆ ನೀಡಬೇಕು ಅಲ್ಲವೇ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸುತ್ತಿದ್ದಂತೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡ, ಒತ್ತಾಯ ತೀವ್ರವಾಗಿ ಕೇಳಿಬರುತ್ತಿದೆ.

ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚುನಾವಣಾ ಬಾಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಮೇಲೆ ಎಫ್.ಐ.ಆರ್‌ ದಾಖಲಿಸುವಂತೆ ಆದೇಶ ನೀಡಿದೆ. ಬಿಜೆಪಿ ನಾಯಕರ ವಾದದ ಪ್ರಕಾರ ಈಗ ನಿರ್ಮಲಾ ಸೀತಾರಾಮನ್‌ ಅವರು ರಾಜೀನಾಮೆ ನೀಡಬೇಕು ಅಲ್ಲವೇ ಎಂದು ಕೇಳಿದ್ದಾರೆ.

ಚುನಾವಣಾ ಬಾಂಡ್ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ಈಗ ನಿರ್ಮಲಾ ಸೀತಾರಾಮನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೂಡ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.