ರಾಜ್ಯ

ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್

ಗಮನಕ್ಕೆ ಬಂದ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್
ತಾಜ್ ವೆಸ್ಟ್ ಎಂಡ್
Published On :

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ.

ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಗರದ ಖ್ಯಾತ ಪಂಚತಾರಾ ಹೊಟೇಲ್ ಗಳಲ್ಲಿ ತಾಜ್​ ವೆಸ್ಟ್​ ಎಂಡ್​​ ಪ್ರಮುಖವಾಗಿದ್ದು, ಇಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು, ಉದ್ಯಮಿಗಳು ಆಗಾಗ ವಾಸ್ತವ್ಯ ಹೂಡುತ್ತಾರೆ. ಘಟನೆ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಹೆಚ್ ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.