ರಾಜ್ಯ

ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ, ಅ.3 ರಂದು ಸಾಹಿತಿ ಹಂ.ಪ. ನಾಗರಾಜಯ್ಯ ಚಾಲನೆ- ಸಿಎಂ ಸಿದ್ದರಾಮಯ್ಯ

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ

ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ, ಅ.3 ರಂದು ಸಾಹಿತಿ ಹಂ.ಪ. ನಾಗರಾಜಯ್ಯ ಚಾಲನೆ- ಸಿಎಂ ಸಿದ್ದರಾಮಯ್ಯ
ಹಂಪ ನಾಗರಾಜಯ್ಯ ಅವರೊಂದಿಗೆ ಸಿಎಂ ಸಿದ್ದರಾಮಯ್ಯ
Published On :

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಾಹಿತಿ ಹಂ.ಪ. ನಾಗರಾಜಯ್ಯ ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ, ವಸ್ತುಪ್ರದರ್ಶನ, ಕ್ರೀಡಾ ಉತ್ಸವ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ನಿರ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.