ರಾಜ್ಯ

ನಿಮ್ಮ ಆಶೀರ್ವಾದ ಇರೋವರ್ಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ: ಸಿದ್ದರಾಮಯ್ಯ, ಹೌದು ಹುಲಿಯಾ ಎಂದ ಅಭಿಮಾನಿಗಳು

ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಆಗ ನೆರೆದಿದ್ದ ಅವರ ಅಭಿಮಾನಿಗಳು ಹೌದು ಹುಲಿಯಾ ಎಂದರು.

ನಿಮ್ಮ ಆಶೀರ್ವಾದ ಇರೋವರ್ಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ: ಸಿದ್ದರಾಮಯ್ಯ, ಹೌದು ಹುಲಿಯಾ ಎಂದ ಅಭಿಮಾನಿಗಳು
Published On :

ಮೈಸೂರು: ಮುಡಾ ಹಗರಣ ಕೇಸಿನಲ್ಲಿ ಮೈಸೂರು ಲೋಕಾಯುಕ್ತದಿಂದ ಎಫ್ ಐಆರ್ ದಾಖಲಾಗಿರುವ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ವಿರೋಧ ಪಕ್ಷಗಳಿಂದ ತೀವ್ರ ಒತ್ತಡ ಕೇಳಿಬರುತ್ತಿದೆ.

ಈ ಸಂದರ್ಭದಲ್ಲಿ ಇಂದು ಮೈಸೂರಿಗೆ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ವೇದಿಕೆಯಲ್ಲಿ ಮಾತನಾಡುತ್ತಾ, ನಿಮ್ಮ ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದಿದ್ದಾರೆ. ಮೈಸೂರಿನ ಅಶೋಕಪುರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು‌ ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಆಗ ನೆರೆದಿದ್ದ ಅವರ ಅಭಿಮಾನಿಗಳು ಹೌದು ಹುಲಿಯಾ ಎಂದರು.

ಈ ಬಾರಿ ಶ್ರೀವತ್ಸ ಗೆದಿದ್ದಾನೆ ಸೋಮಶೇಖರ್ ಸೋತಿದ್ದಾನೆ. ನಾನು, ಮಹದೇವಪ್ಪ, ಶ್ರೀನಿವಾಸ ಪ್ರಸಾದ್ ಎಲ್ಲರೂ ಅಂಬೇಡ್ಕರ್ ವಾದಿಗಳು. ಅಂಬೇಡ್ಕರ್ ಸಂವಿಧಾನವನ್ನು ದಲಿತರಿಗೆ ಮಾತ್ರ ಮಾಡಲಿಲ್ಲ. ಅವಕಾಶ ವಂಚಿತರೆಲ್ಲರಿಗೂ ಮಾಡಿದ್ದಾರೆ.

ಅಂಬೇಡ್ಕರ್ ಸಂವಿಧಾನದಿಂದ ನಾನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಪೌರಕಾರ್ಮಿಕರು ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಯಾಗಲು ಅವಕಾಶ ಕೊಟ್ಟಿರುವುದು ಸಂವಿಧಾನ. ದಲಿತರ ಆರ್ಥಿಕ ಸಾಮಾಜಿಕ ಬದಲಾವಣೆಯಾಗಬೇಕಾದರೇ ಜನಸಂಖ್ಯೆಗೆ ಅನುಗುಣವಾಗಿ ಖರ್ಚು ಮಾಡಬೇಕು ಎಂದಿದ್ದಾರೆ. ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಯಾವುದಕ್ಕೆ ಕಾರಣಕ್ಕೂ ನಿಲ್ಲಿಸಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.