ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು
ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್ಸ್ಟಿಟ್ಯೂಟ್ ಮುಂಭಾಗದಲ್ಲಿ ನಡೆದಿದೆ.
ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಾರು ಟಚ್ ಆಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ, ಈ ವೇಳೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ನ ಹಿಂದಿನ ಚಕ್ರ ಆತನ ತಲೆ ಮೇಲೆ ಮೇಲೆ ಹರಿದಿದೆ. ಪರಿಣಾಮ ಫುಲ್ ಹೆಲ್ಮೆಟ್ ಧರಿಸಿದ್ದರೂ ಆತನ ಜೀವ ಉಳಿದಿಲ್ಲ.
ಮೃತ ವ್ಯಕ್ತಿಯನ್ನು ಈಶ್ವರ್(43) ಎಂದು ಗುರುತಿಸಲಾಗಿದ್ದು, ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ವ್ಯಕ್ತಿ ಈಶ್ವರ್ ವಿದ್ಯಾರಣ್ಯಪುರ ನಿವಾಸಿಯಾಗಿದ್ದು, ಚಿನ್ನ, ಬೆಳ್ಳಿಯ ವ್ಯಾಪಾರ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹೆಂಡತಿಯೊಂದಿಗೆ ವಾಸವಾಗಿದ್ದರು. ಒಬ್ಬ ಮಗನಿಗೆ 13 ವರ್ಷ ಮತ್ತೊಬ್ಬನಿಗೆ 10 ವರ್ಷ.
ಸದ್ಯ ಈಶ್ವರ್ ಮೃತದೇಹ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಶವಗಾರದಲ್ಲಿದೆ. ಪೋಸ್ಟ್ ಮಾರ್ಟಂ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.
ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



