ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್‌ಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಅವರನ್ನು 2023ರ ಜೂನ್ 16ರಂದು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು.
ಆದರೆ, ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಹೀಗಾಗಿ, ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


