ರಾಜ್ಯ

ಫೆ.8ರಂದು ವಿಧಾನಸೌಧದ ಆವರಣದಲ್ಲಿ 2ನೇ ಜನಸ್ಪಂದನಾ ಕಾರ್ಯಕ್ರಮ; ಸದುಪಯೋಗಪಡಿಸಿಕೊಳ್ಳಿ ಎಂದು ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.

ಫೆ.8ರಂದು ವಿಧಾನಸೌಧದ ಆವರಣದಲ್ಲಿ 2ನೇ ಜನಸ್ಪಂದನಾ ಕಾರ್ಯಕ್ರಮ; ಸದುಪಯೋಗಪಡಿಸಿಕೊಳ್ಳಿ ಎಂದು ಸಿಎಂ ಮನವಿ
ಜನಸ್ಪಂದನಾ ಕಾರ್ಯಕ್ರಮ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಫೆಬ್ರವರಿ 8ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ನನ್ನ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ನೇರವಾಗಿ ನನ್ನ ಬಳಿ ಸಲ್ಲಿಸಬಹುದಾಗಿದ್ದು, ಅವುಗಳಿಗೆ ಸ್ಥಳದಲ್ಲೇ ಅಥವಾ ಕಾಲಮಿತಿಯೊಳಗೆ ಪರಿಹಾರ ಗ್ಯಾರಂಟಿ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.