ದೇಶ ವಿಭಜನೆ ಹೇಳಿಕೆ ನೀಡುವವರ ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ
ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆಂಬ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.

ಬೆಂಗಳೂರು: ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆಂಬ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.
ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಈಶ್ವರಪ್ಪ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆಂದು ತಿಳಿಸಿದೆ.
ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಈಶವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


