ರಾಜ್ಯ

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್, ವಿವರಣೆ ಕೇಳಿ ರಾತ್ರಿ ಪಾಳಿಯಲ್ಲಿದ್ದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರಿಂದ ನೊಟೀಸ್!

ಅವಧಿ ಮೀರಿ ಪಬ್ ತೆರೆದಿಟ್ಟು ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ನೊಟೀಸ್ ಜಾರಿ ಮಾಡಿದ್ದಾರೆ.

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್, ವಿವರಣೆ ಕೇಳಿ ರಾತ್ರಿ ಪಾಳಿಯಲ್ಲಿದ್ದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರಿಂದ ನೊಟೀಸ್!
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
Published On :

ಬೆಂಗಳೂರು: ಅವಧಿ ಮೀರಿ ಪಬ್ ತೆರೆದಿಟ್ಟು ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ನೊಟೀಸ್ ಜಾರಿ ಮಾಡಿದ್ದಾರೆ.

ಜನವರಿ 3ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ಯಾವ ರೀತಿ ನಡೆದಿತ್ತು, ಯಾರೆಲ್ಲಾ ಬಂದಿದ್ದರು, ಅವಧಿ ಮೀರಿ ರೆಸ್ಟೋಬಾರ್ ತೆರೆದಿಡಲು ಮುಕ್ತ ಅವಕಾಶ ನೀಡಿದ್ದೇಕೆ, ಘಟನೆ ಬೆಳಕಿಗೆ ಬಂದರೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ವಿವರಣೆ ಕೇಳಿ ಅಂದು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರು ನೊಟೀಸ್ ಜಾರಿ ಮಾಡಿದ್ದಾರೆ.

ಈ ನೊಟೀಸ್ ಗೆ ಪೊಲೀಸರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ, ಪಬ್ ಮಾಲೀಕರ ವಿರುದ್ಧ ಏನು ಕ್ರಮ ಕೈಗೊಳ್ಳಲಿದ್ದಾರೆ, ಪಾರ್ಟಿ ಮಾಡಿದ್ದ ಚಿತ್ರತಂಡ ವಿರುದ್ಧ ಸಹ ಕ್ರಮ ತೆಗೆದುಕೊಳ್ಳಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಜನವರಿ 3ರಂದು ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ರಾಜಾಜಿನಗರದ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.