ಮಾಲ್ ಆಫ್ ಏಷ್ಯಾ ಪ್ರಕರಣ: ಸಂಚಾರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ಗೆ ಪೊಲೀಸರ ಮಾಹಿತಿ
ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಬೆಂಗಳೂರು: ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.
ಡಿಸೆಂಬರ್ 31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ದ್ವಿಚಕ್ರ ವಾಹನಗಳ ಪ್ರವೇಶ ಶುಲ್ಕ ಕಡಿತಗೊಳಿಸಲು ಸೂಚಿಸಲಾಗಿದೆ. ಕ್ಯಾಬ್, ಆಟೋಗಳ ಪಿಕಪ್, ಡ್ರಾಪ್ ಪಾಯಿಂಟ್ ಬದಲಾವಣೆ ಮಾಡಲಾಗಿದೆ. ಮಾಲ್ನ ಉದ್ಯೋಗಿಗಳ ವಾಹನ ಪಾರ್ಕಿಂಗ್ಗೆ ರಿಯಾಯಿತಿ ಪಾಸ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಭದ್ರತಾ ಪರಿಶೀಲನಾ ಪಾಯಿಂಟ್ ಬದಲಾವಣೆ ಮಾಡಿ ಪ್ರೀಪೇಯ್ಡ್ ಆಟೋ ನಿಲ್ದಾಣ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಲಯವು ಪರಿಹಾರ ಕ್ರಮಗಳ ಜಾರಿ ಬಗ್ಗೆ ಜನವರಿ 30ಕ್ಕೆ ವಿವರವಾದ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೇ, ಅಲ್ಲಿಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ವಿಸ್ತರಿಸಿತು.
ಕಳೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು “ನ್ಯಾಯಾಲಯದ ಸೂಚನೆಯಂತೆ ಮಾಲ್ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆದಿದೆ. ಮಾಲ್ ಪ್ರತಿನಿಧಿಗಳು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ. ಪೊಲೀಸ್ ಆಯುಕ್ತರು ಮಾಲ್ಗೆ ಭೇಟಿ ನೀಡಿ, ಶಬ್ದ ಮಾಲಿನ್ಯ, ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ” ಎಂದು ವಿವರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


