ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆ: ಹಿಂದೂ ಕಾರ್ಯಕರ್ತರಿಂದ ಸಂಭ್ರಮ
ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಹುಬ್ಬಳ್ಳಿ: ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಈ ವೇಳೆ ಅಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜೈಲಿನ ಹೊರಗೆ ಜಮಾಯಿಸಿ ಜಯ ಘೋಷ ಕೂಗಿದರು.
ಹಿಂದೂ ಕಾರ್ಯಕರ್ತರು ಪೂಜಾರಿ ಅವರ ಕೊರಳಿಗೆ ಹಾರ ಹಾಕಿ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದರು. ಬಂಧಿತ ಕರಸೇವಕನನ್ನು ಸ್ವಾಗತಿಸಲು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ಮತ್ತು ಬಿಜೆಪಿ ಕಾರ್ಪೊರೇಟರ್‌ಗಳು ಜೈಲಿನ ಹೊರಗೆ ಹಾಜರಿದ್ದರು.
ಬಂಧನದಿಂದ ವಿಚಲಿತನಾಗಲ್ಲ ಜನವರಿ 19ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹೋಗುವುದಾಗಿ ಪೂಜಾರಿ ಹೇಳಿದರು. ರಾಮಜನ್ಮಭೂಮಿ ಆಂದೋಲನದ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನ್ಯಾಯಾಲಯ ಪೂಜಾರಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಘಟಕವು ರಾಜ್ಯಾದ್ಯಂತ ಸರಣಿ ಪ್ರತಿಭಟನೆಗಳನ್ನು ನಡೆಸಿತು. ಅಲ್ಲದೆ ಪೂಜಾರಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಪೂಜಾರಿ ಬಂಧನವು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


