ರಾಜ್ಯ

ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ!

ಜನವರಿ 22 ರಂದು ಅಯೋಧ್ಯೆಯಲ್ಲಿ ನೂತನ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ!
ಅಯೋಧ್ಯೆ ರಾಮಮಂದಿರ
Published On :

ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ನೂತನ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಬಣ್ಣಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.