7 ಕೋಟಿ ಕನ್ನಡಿಗರಿಗೆ ಅವಮಾನ: ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ, ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದಿದ್ದಾರೆ.
ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಕೇಂದ್ರ ಸರ್ಕಾರ ಮುಂದುವರೆಸಿದೆ ಎಂದು ಸಿಎಂ ಕಿಡಿಕಾರಿದ್ದಾರೆ.
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರದ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


