ಚುನಾವಣೆ, ಅಭಿವೃದ್ಧಿ ಕಾರ್ಯ, ಸಾಲ-ಬಾಕಿ ಬಿಲ್: ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಮುಂದೆ ಸಾಲು ಸಾಲು ಸವಾಲು!
ಲೋಕಸಭೆ ಚುನಾವಣೆಗೂ ಮುನ್ನ ಹೊಸ ಅಭಿವೃದ್ಧಿ ಕಾಮಗಾರಿಗಳ ಘೋಷಣೆ, ಪಂಚ ಗ್ಯಾರಂಟಿ ಯೋಜನೆಗಳು, ಸಾಲ ಹಾಗೂ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವ ಒತ್ತಡದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ತಿಂಗಳಾಂತ್ಯದಲ್ಲಿ ಬಜೆಟ್ ಮಂಡಿಸಬೇಕಿದೆ. ಈ ಬಾರಿಯ ಬಜೆಟ್ ಅವರಿಗೆ ಸವಾಲಿನದಾಗಿದ್ದು, ನಾಡಿದ್ದು ಶನಿವಾರ ತಮ್ಮ ಇಲಾಖಾವಾರು ಸಭೆಗಳನ್ನು ಪ್ರಾರಂಭಿಸಲಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಹೊಸ ಅಭಿವೃದ್ಧಿ ಕಾಮಗಾರಿಗಳ ಘೋಷಣೆ, ಪಂಚ ಗ್ಯಾರಂಟಿ ಯೋಜನೆಗಳು, ಸಾಲ ಹಾಗೂ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವ ಒತ್ತಡದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ತಿಂಗಳಾಂತ್ಯದಲ್ಲಿ ಬಜೆಟ್ ಮಂಡಿಸಬೇಕಿದೆ. ಈ ಬಾರಿಯ ಬಜೆಟ್ ಅವರಿಗೆ ಸವಾಲಿನದಾಗಿದ್ದು, ನಾಡಿದ್ದು ಶನಿವಾರ ತಮ್ಮ ಇಲಾಖಾವಾರು ಸಭೆಗಳನ್ನು ಪ್ರಾರಂಭಿಸಲಿದ್ದಾರೆ.
ಕೃಷಿ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ರೇಷ್ಮೆ ಕೃಷಿ, ಪಶುಸಂಗೋಪನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮೀನುಗಾರಿಕೆ, ಒಳನಾಡು ಮತ್ತು ಜಲಮಾರ್ಗಗಳು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಅರಣ್ಯ, ಪರಿಸರ, ಲೋಕೋಪಯೋಗಿ ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಶನಿವಾರ ಮಧ್ಯಾಹ್ನ ಸಭೆ ಆರಂಭವಾಗಿ ರಾತ್ರಿ ಹೊತ್ತಿಗೆ ಮುಗಿಯುವ ನಿರೀಕ್ಷೆಯಿದೆ.
ಕಳೆದ ವರ್ಷ ವಿಧಾನಸಭೆ ಚುನಾವಲಣೆ ಫಲಿತಾಂಶ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು 3.3 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದರು. ಈ ವರ್ಷ 3.6 ಲಕ್ಷ ಕೋಟಿಯಿಂದ 3.7 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ಖಾತರಿ ಯೋಜನೆಗಳಿಗೆ ಕನಿಷ್ಠ 60,000 ಕೋಟಿ ರೂಪಾಯಿ ಅಗತ್ಯವಿದೆ. ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಅನುಷ್ಠಾನದಂತಹ ಸವಾಲುಗಳಿವೆ. ಕಳೆದ ವರ್ಷ ಅವರು ಗ್ಯಾರಂಟಿಗಳತ್ತ ಗಮನಹರಿಸಿದ್ದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಪ್ರತಿಪಕ್ಷಗಳು ಅದರ ಮೇಲೆ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ. ಈ ವರ್ಷ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲು ಈಗ ಒತ್ತಡವಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳುತ್ತಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಏಳು ವರ್ಷಗಳಿಂದ ಮಾಡದ ಆಸ್ತಿ ತೆರಿಗೆಯನ್ನು ಪರಿಷ್ಕರಿಸಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹಾಲು, ಮದ್ಯ ಮತ್ತು ಇತರ ತೆರಿಗೆಗಳ ಬೆಲೆಯನ್ನು ಹೆಚ್ಚಿಸುವ ಪ್ರಸ್ತಾಪಗಳಿವೆ.
ಹಿಂದಿನ ಬಿಜೆಪಿ ಸರ್ಕಾರವು 40,000 ಕೋಟಿ ರೂಪಾಯಿ ಬಾಕಿ ಬಿಲ್‌ಗಳನ್ನು ತೆರವುಗೊಳಿಸಿಲ್ಲ, ಅದರ ಹೊರೆ ತಮ್ಮ ಸರ್ಕಾರದ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


