ರಾಜ್ಯ

ಕೋಮುಲ್ ನೇಮಕಾತಿಯಲ್ಲಿ ಹಗರಣ: ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನೇರವಾಗಿ ಭಾಗಿ; ಇಡಿ ಆರೋಪ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೋಮುಲ್)ಗೆ ನಡೆಯುತ್ತಿರುವ ನೇರ ನೇಮಕಾತಿಗೆ ಸಂಬಂಧಿಸಿದ ಮತ್ತೊಂದು ಹಗರಣ ಸಹ ಬೆಳಕಿಗೆ ಬಂದಿದೆ. ಇದರಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಕೋಮುಲ್ ನೇಮಕಾತಿಯಲ್ಲಿ ಹಗರಣ: ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನೇರವಾಗಿ ಭಾಗಿ; ಇಡಿ ಆರೋಪ
ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ
Published On :

ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೋಮುಲ್)ಗೆ ನಡೆಯುತ್ತಿರುವ ನೇರ ನೇಮಕಾತಿಗೆ ಸಂಬಂಧಿಸಿದ ಮತ್ತೊಂದು ಹಗರಣ ಸಹ ಬೆಳಕಿಗೆ ಬಂದಿದೆ. ಇದರಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. 

ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನೇತೃತ್ವದ ಸಮಿತಿಯು 30 ಅಭ್ಯರ್ಥಿಗಳಿಗೆ ಡೈರಿ ಸಹಕಾರಿ ಸಂಸ್ಥೆಯಲ್ಲಿ ಸಂದರ್ಶನ ಪ್ರಕ್ರಿಯೆಯಲ್ಲಿ ಸಂಪೂರ್ಣ ದುರ್ಬಳಕೆ ಮಾಡಿಕೊಂಡು ಲಂಚ ಪಡೆದು ಕೆಲಸ ನೀಡಿದೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಕೋಮುಲ್‌)ಗೆ ನೌಕರರ ನೇಮಕಾತಿ ಮತ್ತು ಅಕ್ರಮ ಹಂಚಿಕೆ ಅಕ್ರಮಗಳ ಕುರಿತು ಜನವರಿ 8ರಂದು ಇಡಿ ದಾಳಿ ನಡೆಸಿತ್ತು ಎಂಬುದು ಗಮನಾರ್ಹ.

ಕಾಂಗ್ರೆಸ್ ಶಾಸಕ ನಂಜೇಗೌಡ ಮತ್ತು ಇತರ ನಾಲ್ವರು ಸದಸ್ಯರು ನೇತೃತ್ವದ ಡೈರಿ ಸಹಕಾರಿ ಸಂಘವು ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದೆ ಎಂದು ಇಡಿ ಆರೋಪಿಸಿದೆ. ಮಂಡಳಿಯ ನಿರ್ಧಾರದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶಗಳನ್ನು ನೀಡಲಾಗಿದೆ. ಅಂತಿಮ ಫಲಿತಾಂಶವನ್ನು ಸಾರ್ವಜನಿಕಗೊಳಿಸದೆ ತರಬೇತಿಗೆ ಕಳುಹಿಸಲಾಗಿದೆ ಎಂದು ಇಡಿ ತಿಳಿಸಿದೆ. 

ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರತಿ ಸೀಟಿಗೆ 20 ರಿಂದ 30 ಲಕ್ಷ ರೂಪಾಯಿ ಹಣ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ. ಅವ್ಯವಹಾರದಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನೇರ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಕರ್ನಾಟಕದ ಎರಡನೇ ಅತಿ ದೊಡ್ಡ ಹಾಲು ಉತ್ಪಾದಕ ಜಿಲ್ಲಾ ಸಂಸ್ಥೆ ಎಂಬುದು ಗಮನಾರ್ಹ.

ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರು ಇತರೆ ಸಮಿತಿ ಸದಸ್ಯರು ಹಾಗೂ ಕಂದಾಯ ಅಧಿಕಾರಿಗಳ ಜತೆ ಶಾಮೀಲಾಗಿ ಒಂದೇ ತಿಂಗಳಲ್ಲಿ ನಾಲ್ಕು ಸಭೆಗಳಲ್ಲಿ ಹಲವರಿಗೆ 150 ಕೋಟಿ ರೂ. ಮೌಲ್ಯದ ಸುಮಾರು 80 ಎಕರೆ ಜಮೀನು ಮಂಜೂರು ಮಾಡುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಹಲವು ಮಂದಿ ಲಾಭ ಪಡೆದಿದ್ದಾರೆ ಎಂದು ಸಂಸ್ಥೆ ಆರೋಪಿಸಿದೆ.

ಅಷ್ಟೇ ಅಲ್ಲದೆ, ಅನಧಿಕೃತವಾಗಿ ಸರ್ಕಾರಿ ಜಮೀನು ಹಂಚಿಕೆ ಪ್ರಕರಣದಲ್ಲಿ ಕೆ. ವೈ ನಂಜೇಗೌಡ ಮತ್ತಿತರ ಆರೋಪಿಗಳಿಗೆ ಸಂಬಂಧಿಸಿದ 25 ಲಕ್ಷ ರೂ ನಗದು, 50 ಕೋಟಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ದಾಖಲೆಗಳನ್ನ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 150 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಕಾಯ್ದೆ 2002 ರಡಿ ಇಡಿ ಅಧಿಕಾರಿಗಳು ಜನವರಿ 8 ರಂದು ಶೋಧ ಕಾರ್ಯಾಚರಣೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.