ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 67 ಸೋಂಕಿತರು ಗುಣಮುಖರಾಗಿದ್ದಾರೆ. 707 ಪರೀಕ್ಷೆ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 482 ಆಗಿದೆ. ಉಳಿದಂತೆ ಬೆಳಗಾವಿಯಲ್ಲಿ 5, ಮೈಸೂರಿನಲ್ಲಿ 8, ಬಳ್ಳಾರಿ, ಶಿವಮೊಗ್ಗ, ಚಾಮರಾಜನಗರದಲ್ಲಿ 2, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.
ರಾಜ್ಯದಲ್ಲಿಂದು 3,123 ಪರೀಕ್ಷೆ ಮಾಡಲಾಗಿದೆ.ಈ ಪೈಕಿ 2,369 ಆರ್ ಟಿಪಿಸಿಆರ್ ಹಾಗೂ 754 RAT ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.95, ಮರಣ ಪ್ರಮಾಣ ಶೇ. 0.0 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


