ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತಿತರರು ಪಾಲ್ಗೊಂಡರು.

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತಿತರರು ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಮುಖ್ಯಮಂತ್ರಿ ಪರಿಶೀಲಿಸಿದರು.
ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿ, ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ @siddaramaiah ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು… pic.twitter.com/dVYbVhl4OM
ಇದನ್ನೂ ಓದಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆ, ಕಾನೂನು ಕೈಗೆತ್ತಿಕೊಂಡರೆ ಯಾರೇ ಆದರೂ ಶಿಕ್ಷೆ ಖಂಡಿತ: ಸಿಎಂ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


