ರಾಜ್ಯ

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ

ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಲು ಉದ್ದೇಶಿಸಿರುವ ಜಮೀನು ಸಂತ್ರಸ್ತರ ಗ್ರಾಮದಿಂದ ದೂರದಲ್ಲಿರುವುದರಿಂದ ಪರ್ಯಾಯ ಜಮೀನು ಮಂಜೂರು ಮಾಡುವಂತೆ ಸಂತ್ರಸ್ತರು ಮಾಡಿರುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಸಂತ್ರಸ್ತರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. 

ರಾಜ್ಯ ಸರ್ಕಾರ ನೀಡಿದ ಎಲ್ಲಾ ಅಂಶಗಳನ್ನು ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ, ಘಟನೆ ಬೆಳಕಿಗೆ ಬಂದ ನಂತರ ಸ್ವಯಂ ಪ್ರೇರಿತವಾಗಿ ಆರಂಭಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.