ಶಿವಮೊಗ್ಗ: ಪ್ರೀತಿಸಿದ ಯುವಕನನ್ನು 8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ!
ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


