ಕೆಎಸ್ ಆರ್ ಟಿಸಿ: ಟಿಕೆಟ್ ರಹಿತ ಪ್ರಯಾಣಿಕರಿಂದ ರೂ. 5.39 ಲಕ್ಷ ದಂಡ ವಸೂಲಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕರ್ನಾಟಕ ಮತ್ತು ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕರ್ನಾಟಕ ಮತ್ತು ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.
ಡಿಸೆಂಬರ್ನಲ್ಲಿ 43,863 ಬಸ್ಗಳನ್ನು ತಪಾಸಣೆ ನಡೆಸಿದ ಸಿಬ್ಬಂದಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 3,340 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಎಂದು ಗುರುವಾರ ಕೆಎಸ್ ಆರ್ ಟಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಕೆಎಸ್ ಆರ್ ಟಿಸಿಯಿಂದ ಮೃತ ಉದ್ಯೋಗಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ
ಟಿಕೆಟ್ ಇಲ್ಲದೆ ಪ್ರಯಾಣದಿಂದ ನಿಗಮಕ್ಕೆ ಒಟ್ಟು ರೂ. 77, 577 ನಷ್ಟವಾಗಿತ್ತು. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವಾಗ ಮಾನ್ಯವಾದ ಟಿಕೆಟ್ಗಳು/ಪಾಸ್ಗಳನ್ನು ಪಡೆದುಕೊಳ್ಳುವಂತೆ ಬಸ್ ನಿಗಮವು ಸಾರ್ವಜನಿಕರಲ್ಲಿ ವಿನಂತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


