ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯದ ಜನರು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವೀಕ್ಷಿಸಲು ಕಾತರರಾಗಿದ್ದಾರೆ. ಕೇಂದ್ರ ಸರ್ಕಾರವು ಇದಾಗಲೇ ಜನವರಿ 22ರಂದು ಅರ್ಧ ದಿನ ರಜೆ ಘೋಷಣೆ ಮಾಡಿದೆ. ಈ ನೆಲೆಯಲ್ಲಿ ತಾವೂ ಸಹ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕೋರಲಾಗಿದೆ.
ತನ್ನ ಆದರ್ಶಯುತ ಬದುಕಿನ ಮೂಲಕ ಭಾರತ ಸಮಾಜವನ್ನು ಪ್ರಭಾವಿಸಿರುವ ರಾಮದೇವರ ಪ್ರಭಾವಕ್ಕೆ ರಾಜ್ಯದ ಬಹುತೇಕ ಜನರು ಒಳಗಾಗಿದ್ದಾರೆ ಎಂದು ಎಎಬಿ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


