ಬೆಂಗಳೂರು: ಅಪಘಾತದಲ್ಲಿ ಖ್ಯಾತ ಫುಟ್‌ಬಾಲ್ ಆಟಗಾರ ಮೋನೀಶ್ ಸಾವು, ಸಿಎಂ ಸಂತಾಪ
ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ಶನಿವಾರ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜ್ಯಮಟ್ಟದ ಫುಟ್‌ಬಾಲ್ ಆಟಗಾರ ಮೋನೀಶ್ ಕೆ(27) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ಶನಿವಾರ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜ್ಯಮಟ್ಟದ ಫುಟ್‌ಬಾಲ್ ಆಟಗಾರ ಮೋನೀಶ್ ಕೆ(27) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.
ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೋನೀಶ್ ಅವರು ನಿನ್ನೆ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಈ ಸಂಬಂಧ ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


