ಗನ್ ಹಿಡಿದು ರೀಲ್ಸ್: ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದ ಯುವಕ ಬಂಧನ
ಯುವಜನರಿಗೆ ಸೋಶಿಲಯಲ್ ಮೀಡಿಯಾದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬ ಯುವಕರು ಗನ್ ಹಿಡಿದುಕೊಂಡು ರೀಲ್ಸ್ ಮಾಡಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದಾನೆ.

ಬೆಂಗಳೂರು: ಯುವಜನರಿಗೆ ಸೋಶಿಲಯಲ್ ಮೀಡಿಯಾದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬ ಯುವಕರು ಗನ್ ಹಿಡಿದುಕೊಂಡು ರೀಲ್ಸ್ ಮಾಡಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದಾನೆ.
ಈ ಸಂಬಂಧ ಕೇಂದ್ರರ ಅಪರಾಧ ವಿಭಾಗದ ಪೊಲೀಸರು 26 ವರ್ಷದ ಯುವಕ ಶಶಾಂಕ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಈತ ಹಲವು ಬಾರಿ ಮಾರಾಕಾಸ್ತ್ರಗಳು, ಗನ್ ಹಿಡಿದು ವಿಡಿಯೋ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಶಶಾಂಕ್ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
2015ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನಡೆದ ಕೊಲೆ ಪ್ರಕರಣ ಹಾಗೂ 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ನಡೆದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಶಾಂಕ್ ನಂಟು ಇದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ರಾಜಾಜಿನಗರ ಮತ್ತು ತಿಲಕನಗರದಲ್ಲಿ ಕಳ್ಳತನ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಕೊಲೆ ಪ್ರಕರಣಗಳೂ ಇವೆ ಎನ್ನಲಾಗಿದ್ದು, ಪುಟ್ಟೇನಹಳ್ಳಿಯಲ್ಲಿ ಏಳು ಹಲ್ಲೆ ಪ್ರಕರಣಗಳೂ ಇವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


