ಹತಾಶ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳಲು ಯತ್ನ: ಡಿಕೆ ಶಿವಕುಮಾರ್
ಹತಾಶಗೊಂಡಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಹತಾಶಗೊಂಡಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆರ್ ಎಸ್ಎಸ್ ನಲ್ಲಿ ಗುರುತಿಸಿಕೊಂಡಿದ್ದ, ಬಿಜೆಪಿ ನಾಯಕರಾಗಿದ್ದ ಜಗದೀಶ್ ಶೆಟ್ಟರ್ 2023 ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದರು.
ಮೈಸೂರಿನ ಬಯಲುಕುಪ್ಪೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಲ್ಲಿರುವ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆದುಕೊಳ್ಳಲು ಹಲವು ಬಿಜೆಪಿ ನಾಯಕರು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದು ಪಕ್ಷದ ದುರ್ಬಲತೆಯ ಸಂಕೇತವಾಗಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅವರ ಬಳಿ ಅಭ್ಯರ್ಥಿಗಳಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವ ಮತ್ತು ಆತ್ಮಸ್ಥೈರ್ಯದ ಗಂಭೀರ ಕೊರತೆಯಿಂದ ಬಳಲುತ್ತಿವೆ ಮತ್ತು ಆದ್ದರಿಂದ ಅವರು ಕೈಜೋಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಟೀಕಾ ಪ್ರಹಾರ ನಡೆಸಿದ್ದಾರೆ.
ಬಿಜೆಪಿಯನ್ನು ದೂರವಿಡಲು ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದೆವು, ಈಗ ಕುಮಾರಸ್ವಾಮಿಯವರು ತಮ್ಮ ಸರ್ಕಾರವನ್ನು ಬೀಳಿಸಿದವರನ್ನೇ ಅಪ್ಪಿಕೊಳ್ಳುತ್ತಿದ್ದಾರೆ. ಈ ಅಪವಿತ್ರ ಮೈತ್ರಿ ಎರಡು ಪಕ್ಷಗಳ ಸ್ಥಿತಿಗತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


