ವಂಟಮುರಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಓಡಿಹೋಗಿದ್ದ ಜೋಡಿ ಕೊನೆಗೂ ವಿವಾಹ
2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.

ಬೆಳಗಾವಿ: 2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.
ಓಡಿಹೋಗಿದ್ದ ಜೋಡಿ ಪರಸ್ಪರ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದು, ಬೆಳಗಾವಿಯ ದಕ್ಷಿಣ ವಲಯ ಉಪನೋಂದಣಿ ಕಚೇರಿಯಲ್ಲಿ ಮದವೆಯನ್ನು ನೋಂದಾಯಿಸಲಾಗಿದೆ.
ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಯುವತಿ ಮತ್ತು ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಹುಡುಗಿಯ ಮನೆಯವರು ಡಿಸೆಂಬರ್ 12, 2023 ರಂದು ಹುಡುಗಿಗೆ ಇನ್ನೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥ ನಿಗದಿಪಡಿಸಿದ್ದರು. ಇದನ್ನು ತಿಳಿದ ನಂತರ, ಹುಡುಗಿ ತಾನು ಪ್ರೀತಿಸುತ್ತಿದ್ದ ಹುಡುಗನ ಜೊತೆ ಹಿಂದಿನ ರಾತ್ರಿ ಓಡಿಹೋಗಿದ್ದರು.
ಈ ವಿಷಯ ತಿಳಿದ ನಂತರ ಕೋಪಗೊಂಡ ಹುಡುಗಿಯ ಪೋಷಕರು ಹುಡುಗನ ಮನೆಗೆ ತೆರಳಿ ಅವರ ಮನೆಯನ್ನು ಧ್ವಂಸಗೊಳಿಸಿದ್ದರು. ಅಲ್ಲದೆ ಯುವತಿಯ ತಾಯಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕುವ ಮೂಲಕ ಇಡೀ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


