ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯ

ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯವಾಗಲಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣ ಸೇವೆಗಳನ್ನು ಸುಲಭವಾಗಿ ನ್ಯಾವಿಗೇಟ್ ಮಾಡಬಹುದು.

ಬೆಂಗಳೂರು ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಒಳಾಂಗಣ.
Published On :

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಬಿಐಎಎಲ್) ತನ್ನ ವೆಬ್‌ಸೈಟ್‌ಗೆ ಕನ್ನಡ ಭಾಷಾ ಆಯ್ಕೆಯನ್ನು ಅಳವಡಿಸಿದೆ.

ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯವಾಗಲಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣ ಸೇವೆಗಳನ್ನು ಸುಲಭವಾಗಿ ನ್ಯಾವಿಗೇಟ್ ಮಾಡಬಹುದು ಎಂದು ಬಿಐಎಎಲ್ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

"ನಮ್ಮ ವೆಬ್‌ಸೈಟ್‌ನ ಕನ್ನಡ ಆವೃತ್ತಿಯನ್ನು https://www.bengaluruairport.com/kn/ ಪರಿಚಯಿಸಲು ನಾವು ಸಂತೋಷಪಡುತ್ತೇವೆ. ಇದು ಹೆಚ್ಚು ಸಮಗ್ರ ಮತ್ತು ಸರಳವಾಗಿ ಪ್ರವೇಶಿಸಬಹುದಾದ ಅನುಭವವನ್ನು ಸೃಷ್ಟಿಸುವ ಗುರಿ ಹೊಂದಿದೆ. ನಮ್ಮ ಗ್ರಾಹಕರು ತಮ್ಮ ಆದ್ಯತೆಯ ಭಾಷೆಯಲ್ಲಿ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಬಹುದು" ಎಂದು ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮಾರರ್ ಅವರು ಹೇಳಿದ್ದಾರೆ.

ಹೊಸ ಭಾಷಾ ಆಯ್ಕೆಯು ಕನ್ನಡದಲ್ಲಿ ರಿಯಲ್ ಟೈಮ್ ವಿಮಾನ ಮಾಹಿತಿಯನ್ನು ನೀಡುತ್ತದೆ. ನಿರ್ಗಮನ, ಆಗಮನ ಮತ್ತು ವಿಳಂಬಗಳ ಕುರಿತು ಮಾಹಿತಿ ನೀಡುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡದಲ್ಲಿ ಸಮಗ್ರ FAQ ಗಳು ಸಾಮಾನ್ಯ ಪ್ರಶ್ನೆಗಳನ್ನು ಸಹ ಪರಿಹರಿಸುತ್ತವೆ, ಪ್ರಯಾಣ ಪ್ರಕ್ರಿಯೆಯನ್ನು ಸರಳಗೊಳಿಸುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣದಾದ್ಯಂತ ಪ್ರಮುಖ ಬಹುಭಾಷಾ ಫಲಕಗಳು, ವಿಮಾನ ಮಾಹಿತಿ ಪ್ರದರ್ಶನ ವ್ಯವಸ್ಥೆ, ಸಾರ್ವಜನಿಕ ಘೋಷಣೆ ವ್ಯವಸ್ಥೆಗಳು, ಅಂಗಡಿಗಳು ಮತ್ತು ಮಳಿಗೆಗಳ ಮೇಲಿನ ಫಲಕಗಳು, ಸಾಮಾಜಿಕ ಮಾಧ್ಯಮ ಉಪಸ್ಥಿತಿಯಿಂದ ಹಿಡಿದು ಕನ್ನಡದಲ್ಲಿ ಸಿಬ್ಬಂದಿ ಸಹಾಯದವರೆಗೆ, ವಿಮಾನ ನಿಲ್ದಾಣವನ್ನು ಕರ್ನಾಟಕದ ಸಂಸ್ಕೃತಿ ಮತ್ತು ನೀತಿಯನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಮಾರರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.