ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಐಪಿಎಲ್ ಪಂದ್ಯಗಳಿಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. ಈ 7 ಪಂದ್ಯಗಳು ನಡೆಯುವ ದಿನ ಮೆಟ್ರೋ ಸಂಚಾರವನ್ನು ರಾತ್ರಿ 12:30ರ ವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು: ಕ್ರಿಕೆಟ್ ಪ್ರಿಯರಿಗೆ ಬಿಎಂಆರ್ ಸಿಎಲ್ ಮಂಗಳವಾರ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಗಳಿಗೆ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ.
ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. ಈ 7 ಪಂದ್ಯಗಳು ನಡೆಯುವ ದಿನ ಮೆಟ್ರೋ ಸಂಚಾರವನ್ನು ರಾತ್ರಿ 12:30ರ ವರೆಗೆ ವಿಸ್ತರಿಸಲಾಗಿದೆ. ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 12:30ಕ್ಕೆ ಕೊನೆ ರೈಲು ಹೊರಡಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.
"ನಾಡಪ್ರಭು ಕೆಂಪೇಗೌಡ ಸ್ಟೇಷನ್ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಬೆಳಗಿನ ಜಾವ 1.15 ಕ್ಕೆ ಹೊರಡಲಿದೆ" ಎಂದು ಪ್ರಕಟಣೆ ತಿಳಿಸಿದೆ.
ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಈ ಸೀಸನ್‌ನ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ನಂತರ ಏಪ್ರಿಲ್ 10, 18 ಮತ್ತು 24 ರಂದು ಹಾಗೂ ಮೇ 3, 13 ಮತ್ತು 17 ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



