ರಾಜ್ಯ

ಹಾಲು, ಕರೆಂಟ್ ಹೆಚ್ಚಳ ಬಳಿಕ ಗ್ರಾಹಕರಿಗೆ ಮತ್ತೊಂದು ಬರೆ: ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ; ಮಧ್ಯರಾತ್ರಿಯಿಂದಲೇ ಜಾರಿ!

ರಾಜ್ಯದಲ್ಲಿ ಹಿಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಇದರ ಮಧ್ಯೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಹಾಲು, ಕರೆಂಟ್ ಹೆಚ್ಚಳ ಬಳಿಕ ಗ್ರಾಹಕರಿಗೆ ಮತ್ತೊಂದು ಬರೆ: ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ; ಮಧ್ಯರಾತ್ರಿಯಿಂದಲೇ ಜಾರಿ!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಹಿಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಇದರ ಮಧ್ಯೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್​ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.