ಆರು ವಾರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು: ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ಓಲಾ, ಉಬರ್ ಮತ್ತು ರ‍್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿದೆ. ಆರು ವಾರಗಳ ನಂತರ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರು ಬುಧವಾರ ಈ ಆದೇಶ ಹೊರಡಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ ಹೊರತು, ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಿಲ್ಲ ಮತ್ತು ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಈ ಅರ್ಜಿಗಳ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶದ ಆಧಾರದ ಮೇಲೆ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಅಂಶದ ಬಗ್ಗೆ ನ್ಯಾಯಾಲಯದ ಗಮನ ಸೆಳೆದಾಗ, ನ್ಯಾಯಾಲಯವು ಇಂದಿನಿಂದ ಆರು ವಾರಗಳ ಕಾಲ ಕಾರ್ಯನಿರ್ವಹಿಸಲು ಅವರಿಗೆ ಅನುಮತಿ ನೀಡಿದೆ ಮತ್ತು ಆರು ವಾರಗಳ ನಂತರ ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



