ರಾಯಚೂರು: ಮಸ್ಕಿ ಕಾಂಗ್ರೆಸ್ ಶಾಸಕನ ಪುತ್ರ, ಸಹೋದರನಿಂದ ಮೊಲಗಳ ಬೇಟೆ- ಮೆರವಣಿಗೆ; ಕೇಸ್ ದಾಖಲು
ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗಿದೆ

ರಾಯಚೂರು: ಬೇಟೆಯಾಡಿದ ಕಾಡು ಮೊಲಗಳೊಂದಿಗೆ ಸಾರ್ವಜನಿಕವಾಗಿ ಮೆರವಣಿಗೆ ನಡೆಸುತ್ತಿರುವ ವೀಡಿಯೊಗಳು ಕಾಣಿಸಿಕೊಂಡ ನಂತರ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ್ ಅವರ ಪುತ್ರ ಸತೀಶ್ ಗೌಡ, ಅವರ ಸಹೋದರ ಸೇರಿದಂತೆ ಹಲವರ ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರ್ವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಮೂಲಕ ಶಾಸಕರ ಪುತ್ರ ಸತೀಶ್ಗೌಡ, ಸಹೋದರ ಸಿದ್ದನಗೌಡ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ.
ಶಾಸಕರ ಪುತ್ರ, ಸಹೋದರನ ನೇತೃತ್ವದಲ್ಲಿ ಮೊಲಗಳನ್ನು ಬೇಟೆಯಾಡಲಾಗಿದೆ. ಬಳಿಕ, ಮೊಲಗಳ ಕಳೆಬರಹವನ್ನು ಕಟ್ಟಿಗೆಗಳಿಗೆ ಕಟ್ಟಿ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಗಿದೆ. ಅಲ್ಲದೇ, ಖಡ್ಗ ಮತ್ತು ಕೊಡಲಿ ಪ್ರದರ್ಶನ ಮಾಡಲಾಗಿದೆ.
ಘಟನೆ ಸಂಬಂಧ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶ್ ಗೌಡ ಹಾಗೂ ಸಹೋದರ ಸಿದ್ದನಗೌಡ ಹಾಗೂ ದುರ್ಗೇಶ್ ಸೇರಿ ಹಲವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.
ಘಟನೆ ಸಂಬಂಧ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾತನಾಡಿ, ಮೊಲಗಳನ್ನು ಮೆರವಣಿಗೆ ಮಾಡುವ ವಿಡಿಯೋ ವೈರಲ್ ಆಗಿದೆ. ಈಗಾಗಲೇ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲಿ, ಪ್ರಕರಣ ದಾಖಲಾದ ಬಳಿಕ ಮುಂದಿನ ಹಂತದಲ್ಲಿ ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



