ಚಿತ್ರದುರ್ಗ: 10 ಬಾರಿ ಪಲ್ಟಿಯಾದ ಕಾರು! ಒಂದೇ ಕುಟುಂಬದ ಮೂವರು ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿತ್ರದುರ್ಗ: ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು 10 ಬಾರಿ ಪಲ್ಟಿಯಾಗುವುದನ್ನು ಕಾಣಬಹುದು.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, 10 ಬಾರಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಮೌಲಾ ಅಬ್ದುಲ್ (35) ಹಾಗೂ ಆತನ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆಯವರಾದ ಕುಟುಂಬ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


