ರಾಜ್ಯ

ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಇಬ್ಬರು ಶಿಕ್ಷಕರು ಅಮಾನತು

ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಜನವರಿಯಲ್ಲಿ ಘಟನೆ ನಡೆದಿತ್ತು. ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಇಬ್ಬರು ಶಿಕ್ಷಕರು ಅಮಾನತು
ಅಮಾನತು (ಸಾಂಕೇತಿಕ ಚಿತ್ರ)
Published On :

ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲು ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಜನವರಿಯಲ್ಲಿ ಘಟನೆ ನಡೆದಿತ್ತು. ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಸಾಮಾಜಿಕ ಕಾರ್ಯಕರ್ತ ನಾಗೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ, ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಾಕಮ್ಮ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಮ್ಮ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾದೇಶಿಕ ಸುದ್ದಿ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಬಳಿಕ ಘಟನೆಯ ಬಗ್ಗೆ ನಾಗೇಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಫೆಬ್ರವರಿ ಅಂತ್ಯದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಮತ್ತು ಶಿಕ್ಷಣ ಇಲಾಖೆ ಆಂತರಿಕ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.