ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ
ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ.

ಧಾರವಾಡ: ಕಳೆದ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿ ಚಾರ್ಜ್ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ.
2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ್ದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ನಡೆ ಖಂಡಿಸಿ ಬಿಜೆಪಿ ಹಾಗೂ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ನಡೆಸಿದ್ದರು ಮತ್ತು ತಮ್ಮ ಸಮುದಾಯದ ಜನರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳು ಅಮಾನತು ಮಾಡುವಂತೆ ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



