ರಾಜ್ಯ

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ

ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ
ಗೃಹ ಸಚಿವ ಜಿ ಪರಮೇಶ್ವರ್
Published On :

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರಲ್ಲ. ಪರಿಶೀಲಿಸಿ ಸತ್ಯ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು.

ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತರಾಗಿದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ತಮ್ಮ ಸಾವಿಕೆ ನಿರ್ಧಾರಕ್ಕೆ ಕಾರಣ ತಿಳಿಸಿದ್ದಾರೆ. ಅಲ್ಲದೆ, ಕೊಡಗು ಜಿಲ್ಲೆಯ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ಮೇಲೆ ಆರೋಪ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಮೃತ ವಿನಯ್ ಕೊಡಗು ಸಮಸ್ಯೆ, ಸಲಹೆ ಸೂಚನೆಯ ವಾಟ್ಸ್​ಆ್ಯಪ್ ಗ್ರೂಪ್ ಮಾಡಿದ್ದರು. ಈ ಗ್ರೂಪ್​​ ಮೂಲಕ ಕಾಂಗ್ರೆಸ್​ ಶಾಸಕ ಪೊನ್ನಣ್ಣ ತೇಜೋವಧೆಯ ಆರೋಪ ಹೊತ್ತಿದ್ದರು. ಈ ಬಗ್ಗೆ ಕೊಡಗಿನಲ್ಲಿ ರಾಜಕೀಯ ಪ್ರೇರಿತ ಪ್ರಕರಣದಲ್ಲಿ FIR ದಾಖಲಾಗಿತ್ತು. ಗ್ರೂಪ್‌ನಲ್ಲಿ ಯಾರೋ ಹಾಕಿದ್ದ ಮೆಸೇಜ್‌ಗೆ ವಿನಯ್ ಮೇಲೆ FIR ಆಗಿತ್ತು.

ಮಡಿಕೇರಿ ನಗರ ಠಾಣೆಯಲ್ಲಿ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ದೂರು ನೀಡಿದ್ದರು. ಅದರಂತೆ ಕೆಲವು ದಿನಗಳ ಹಿಂದೆ ವಿನಯ್ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮನನೊಂದು ಆತ್ಮಹತ್ಯೆ ಮಾಡಿಕೊಂಡುವ ಬಗ್ಗೆ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.