ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ.

ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ನಸುಕಿನ ಜಾವ ಸಂಭವಿಸಿದೆ.
ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ಭೀಕರ ಅಪಘಾತ; ಕಾರಿಗೆ ಐರಾವತ ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


