ಡೀಸೆಲ್ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ
ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಿದ್ದು 5 ಲಕ್ಷ ಲಾರಿಗಳು ಸಂಚಾರ ನಿಲ್ಲಿಸಲಿವೆ.
ಮುಷ್ಕರಕ್ಕೆ ಯಾರ್ಯಾರ ಬೆಂಬಲ:
* 5 ಲಕ್ಷ ಲಾರಿ ಬಂದ್
* ಏರ್ ಪೋರ್ಟ್ ಟ್ಯಾಕ್ಸಿ ಬಂದ್
* ಗೂಡ್ಸ್ ವಾಹನಗಳು, ಪೆಟ್ರೋಲ್ ಡಿಸೇಲ್ ಲಾರಿ ಬಂದ್
* ಜಲ್ಲಿಕಲ್ಲು, ಮರಳು ಲಾರಿ ಬಂದ್
* ಚಾಲಕರ ಸಂಘದಿಂದ ಬಂದ್

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ; ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಂಪುಟದ ಮುಂದೆ: ಡಿ.ಕೆ ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


