ದಾವಣಗೆರೆ: ಅಪ್ರಾಪ್ತ ಬಾಲಕರ ಮೇಲೆ ಅಮಾನುಷ ಕೃತ್ಯ; ಮರಕ್ಕೆ ಕಟ್ಟಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಲೂರಿನ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್ 4ರಂದೇ ಈ ಘಟನೆ ನಡೆದಿತ್ತು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳತನದ ಆರೋಪ ಮಾಡಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿದ್ದ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಸುಭಾಷ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಕ್ಕಿ-ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಸುಭಾಷ್, ಲಕ್ಕಿ , ದರ್ಶನ್ , ಪರಶು , ಶಿವದರ್ಶನ್ ಸೇರಿದಂತೆ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬ್ಯಾಡ್ಮಿಂಟನ್ ಕೋಚ್ ಬಂಧನ; ಫೋನ್ನಲ್ಲಿ 8 ಹುಡುಗಿಯರ ವಿಡಿಯೋ ಪತ್ತೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


