ಹುಬ್ಬಳ್ಳಿ: ಡಿವೈಡರ್‌ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವು
ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್ ಕುಮಾರಿ (63) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭಾನುವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್ ಕುಮಾರಿ (63) ಎಂದು ಗುರುತಿಸಲಾಗಿದೆ.
ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ವಿರೇಶ್ ಹಿರೇಮಠ(65) ಎಂಬುವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿಯಿಂದ ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಸಂಪತ್ ಕುಮಾರಿ ಮತ್ತು ವಿರೇಶ್ ಹಿರೇಮಠ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಪತ್ ಕುಮಾರಿ ಮೃತಪಟ್ಟಿದ್ದಾರೆ. ವಿರೇಶ್ ಹಿರೇಮಠ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



