ರಾಜ್ಯ

ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ

ಯಶವಂತಪುರ ವೃತ್ತದ ಬಳಿ ರಸ್ತೆಯ ಬದಿಯಲ್ಲಿ ಸುಮಾರು 10-15 ಲೋಡ್ ನಿರ್ಮಾಣ ತ್ಯಾಜ್ಯ ಸುರಿದಿರುವುದನ್ನು ಗಮನಿಸಲಾಗಿದೆ. ಆದ್ದರಿಂದ, ನಿರ್ಮಾಣ ತ್ಯಾಜ್ಯವನ್ನು ಸಾಗಿಸುವ ಎಲ್ಲಾ ಟ್ರಕ್‌ಗಳು ಮತ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು.

ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ
ಡಿ.ಕೆ. ಶಿವಕುಮಾರ್
Published On :

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯುವುದನ್ನು ತಡೆಯಲು ಮತ್ತು ಎಲ್ಲಾ ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸಲು ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ ಮತ್ತು ಇತರ ವಿಷಯಗಳ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡ ಶಿವಕುಮಾರ್ ಅವರು, "ಸಂಸ್ಕರಿತ ನೀರಿನಿಂದ ಕೆರೆಗಳನ್ನು ತುಂಬಿಸುವ ಜವಾಬ್ದಾರಿಯನ್ನು ಬಿಡಬ್ಲ್ಯೂಎಸ್ಎಸ್ಬಿಗೆ ವಹಿಸಲು ನಿರ್ಧರಿಸಲಾಗಿದೆ" ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚನೆ ನೀಡಿದರು.

ಇದೇ ವೇಳೆ ಕಟ್ಟಡ ನಿರ್ಮಾಣಗಳ ತ್ಯಾಜ್ಯವನ್ನು ಸಾಗಿಸುವ ಟ್ರಕ್‌ಗಳಿಗೆ ಜಿಪಿಎಸ್ ಅಳವಡಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಶವಂತಪುರ ವೃತ್ತದ ಬಳಿ ರಸ್ತೆಯ ಬದಿಯಲ್ಲಿ ಸುಮಾರು 10-15 ಲೋಡ್ ನಿರ್ಮಾಣ ತ್ಯಾಜ್ಯವನ್ನು ಸುರಿಯಲಾಗಿರುವುದನ್ನು ನಾನು ಮತ್ತು ಪಾಲಿಕೆ ಆಯುಕ್ತರು ನೋಡಿದ್ದೇವೆ. ಆದ್ದರಿಂದ, ನಿರ್ಮಾಣ ತ್ಯಾಜ್ಯವನ್ನು ಸಾಗಿಸುವ ಎಲ್ಲಾ ಟ್ರಕ್‌ಗಳು ಮತ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಟ್ರಕ್‌ಗಳು ಕಸವನ್ನು ಎಲ್ಲಿ ಸಂಗ್ರಹಿಸುತ್ತವೆ ಮತ್ತು ಎಲ್ಲಿ ವಿಲೇವಾರಿ ಮಾಡುತ್ತವೆ ಎಂಬುದನ್ನು ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕೆಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.