ರಾಜ್ಯ

18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿ: ಸ್ಪೀಕರ್'ಗೆ ಸುರೇಶ್ ಕುಮಾರ್ ಮನವಿ

18 ಶಾಸಕರ ಅಮಾನತು ರದ್ದುಗೊಳಿಸುವವರೆಗೆ ಎಲ್ಲಾ ಬಿಜೆಪಿ ಶಾಸಕರು ಯಾವುದೇ ಶಾಸಕಾಂಗ ಸಮಿತಿ ಸಭೆಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿ: ಸ್ಪೀಕರ್'ಗೆ ಸುರೇಶ್ ಕುಮಾರ್ ಮನವಿ
ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್
Published On :

ಬೆಂಗಳೂರು: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿ ಶಾಸಕರಾಗಿ ತಮ್ಮ ಜವಾಬ್ದಾರಿಗಳನ್ನು ಮುಂದುವರಿಸಲು ಅವಕಾಶ ನೀಡುವಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 30 ರಂದು, ಸ್ಪೀಕರ್ ಅವರೊಂದಿಗೆ ಮಾತನಾಡಿ, ಅವರ ನಿರ್ಧಾರದ ಪರಿಣಾಮಗಳನ್ನು ವಿವರಿಸಿ, ಮರುಪರಿಶೀಲಿಸುವಂತೆ ಅಥವಾ ಶಾಸಕರ ಮೇಲೆ ವಿಧಿಸಲಾದ ಷರತ್ತುಗಳನ್ನು ಸಡಿಲಿಸುವಂತೆ ವಿನಂತಿಸಿದ್ದೇನೆಂದು ಹೇಳಿದರು.

ಸ್ಪೀಕರ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆಂದು ತಿಳಿಸಿದ್ದಾರೆ.

18 ಶಾಸಕರ ಅಮಾನತು ರದ್ದುಗೊಳಿಸುವವರೆಗೆ ಎಲ್ಲಾ ಬಿಜೆಪಿ ಶಾಸಕರು ಯಾವುದೇ ಶಾಸಕಾಂಗ ಸಮಿತಿ ಸಭೆಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಸ್ಪೀಕರ್ ನಿರ್ಧಾರ ಮತ್ತು ಪಕ್ಷದ (ಬಿಜೆಪಿ) ನಿಲುವಿನಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ನಡೆಸಲಾಗುವ ಸಮಿತಿಗಳ ಸಭೆಗಳಿಗೆ ಅವರಲ್ಲಿ ಯಾರೂ ಹಾಜರಾಗಲು ಸಾಧ್ಯವಿಲ್ಲ. ಚುನಾಯಿತ ಪ್ರತಿನಿಧಿಗಳಾಗಿ, ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಶಾಸಕರ ಜವಾಬ್ದಾರಿಯಾಗಿದೆ. ಸಂಸದೀಯ ಸಂಪ್ರದಾಯಗಳ ಹಿತದೃಷ್ಟಿಯಿಂದ, ಅಮಾನತು ರದ್ದುಗೊಳಿಸಿ ಮತ್ತು ಶಾಸಕರು ತಮ್ಮ ಜವಾಬ್ದಾರಿಗಳನ್ನು ಮುಂದುವರಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.