ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು...? ಇಲ್ಲಿದೆ ಮಾಹಿತಿ..
ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರಿಸಿದೆ.

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರಿಸಿದೆ.
ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ. ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನಸೌಧ ನೋಡಲು ವ್ಯವಸ್ಥೆ ಮಾಡಲಾಗುತ್ತಿದೆ.
ವಿಧಾನಸೌಧ ಪ್ರವೇಶಕ್ಕೆ ಶುಲ್ಕ, ಷರತ್ತು ಮತ್ತು ನಿಬಂಧನೆಗಳು
ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ವಿಧಾನಸೌಧದ ವೀಕ್ಷಣೆಗೆ ಅವಕಾಶ ಇರಲಿದೆ. ಇದಕ್ಕಾಗಿ “Guided Tour” ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.
ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರ ಜನಸ್ನೇಹಿಯಾಗಿರುವಂತೆ ಚಿಂತನೆ ನಡೆಸಲಾಗುತ್ತಿದೆ.
ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸತಕ್ಕದ್ದು ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸತಕ್ಕದ್ದು ಎಂಬ ಪ್ರಸ್ತಾವನೆ ಸಲ್ಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



