ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್: ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ
ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ.

ಕೊಪ್ಪಳ: ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರೂ ಆಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ ಎಂದರು.
ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ. ಮುಖ್ಯಮಂತ್ರಿಗಳು ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಆಗಿರುತ್ತದೆ ಎಂದು ಹೇಳಿದ್ದಾರೆ.
22 ವರ್ಷಗಳಷ್ಟು ಹಳೆಯದಾದ ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸ್ಸಿನಲ್ಲಿ ಸೇರಿಸಿ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್ ಆರ್. ಅವರಿಗೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



