ಚಿಕ್ಕಮಗಳೂರು: ಮನೆ ಮೇಲೆ KSRTC ಬಸ್ ಬಿದ್ದು 30 ಮಂದಿಗೆ ಗಾಯ
ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಬಾಳೆಹೊನ್ನೂರು (ಚಿಕ್ಕಮಗಳೂರು): ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
ಬಸ್ ತುಂಬಾ ಹಳೆಯದಾಗಿದ್ದು, ಉತ್ತಮವಾಗಿ ನಿರ್ವಹಿಸದೇ ಇರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣದಲ್ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



