ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!
ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದಾವಣಗೆರೆ: ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಘೋರ ದುರಂತವೊಂದು ನಡೆದಿದೆ. ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



