ಬೆಂಗಳೂರು: ದಾಬಸ್ ಪೇಟೆ ಬಳಿ ಡಿವೈಡರ್ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.

ಬೆಂಗಳೂರು: ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಕಾರೊಂದು ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಇಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಮಕ್ಕಳಿಬ್ಬರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು.
ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ಭೀಕರ ಅಪಘಾತ; ಕಾರಿಗೆ ಐರಾವತ ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


